ಅನಿಲ್ ಲೋಬೋ ಪುರಸಭಾ ಸದಸ್ಯತ್ವ ವಜಾಕ್ಕೆ ತಾತ್ಕಾಲಿಕ ತಡೆಯಾಜ್ಞೆ



 

ಮೂಡುಬಿದಿರೆ: ಮಾ.10ರಂದು ಹೈಕೋರ್ಟ್ ಅನಿಲ್ ಲೋಬೋ ಪುರಸಭಾ ಸದಸ್ಯತ್ವ ವಜಾಗೊಳಿಸುವಂತೆ ಆದೇಶ ನೀಡಿದ್ದು, ಇದೀಗ ಹೈಕೋರ್ಟ್ ಒಂದು ತಿಂಗಳವರೆಗಿನ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. 

 

ತನ್ನ ಸದಸ್ಯತ್ವ ವಜಾಗೊಳಿಸುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಪೂರಕವಾಗುವಂತೆ ಪುರಸಭಾ ಸದಸ್ಯತ್ವ ರದ್ದು ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ಅನಿಲ್ ಲೋಬೋ ಹೈಕೋರ್ಟ್‍ಗೆ ಮನವಿ ಮಾಡಿದ್ದರು.

 

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅನಿಲ್ ಲೋಬೋ ಅವರು ತನ್ನ ಆಯ್ಕೆಯನ್ನು ಪ್ರಶ್ನಿಸಿ ಪ್ರತಿಸ್ಪರ್ಧಿ, ಜೆಡಿಎಸ್ ಅಭ್ಯರ್ಥಿ ಕೃಷ್ಣರಾಜ ಹೆಗ್ಡೆಯವರು ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ತನ್ನ ಸದಸ್ಯತ್ವವನ್ನು ರದ್ದುಗೊಳಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸಲ್ಲಿಸಲು ಸಿದ್ಧತೆ ನಡೆಸುತ್ತಿರುವುದಾಗಿ ಅವರು ಹೇಳಿದರು. 

 

ಸುದ್ದಿಗೋಷ್ಠಿಯಲ್ಲಿ ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್ ಉಪಸ್ಥಿತರಿದ್ದರು. 





Write your Comments on this Article
Your Name
Place
Your E-mail
Your Comment   You have characters left.
Security Validation
Enter the security validation code as displayed above:
    
Disclaimer: Kindly do not post any abusive, defamatory, infringing, obscene, indecent, discriminatory or unlawful material or SPAM. Editor reserves the right to block/ remove without notice any content received from users.
Suvarna News 24X7 Live online
333 Album